Home / ಜಿಲ್ಲೆ / ಬೆಳಗಾವಿ / ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ

Spread the love

ಬೆಳಗಾವಿ : ಪೀರನವಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಅಭಿಮಾನಿಗಳ ಕನಸಾಗಿದೆ.

ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶ ಮಾಡಬೇಕು. ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಮಹದೇವ ತಳವಾರ, ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗುರನ್ನವರ ಸೇರಿದಂತೆ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ತೋಟಗಾರಿಕೆ ಬೆಳೆ ವಿಮೆ: 31 ಕೊನೆ ದಿನ

Spread the love ಬ್ಯಾಡಗಿ: ತಾಲ್ಲೂಕಿನ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಅಡಿಕೆ, ಶುಂಠಿ, ಹಸಿ ಮೆಣಸಿನಕಾಯಿ ಹಾಗೂ ಮಾವು ಬೆಳೆಗಳಿಗೆ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ