ಬೆಳಗಾವಿ: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಯತ್ನಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಹಾನಿಯಾದ ಪ್ರದೇಶದಲ್ಲಿ ಮಂಗಳವಾರ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಗೆ ಆಗಮಿಸಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿಎಂ ಅವರನ್ನು ಭೇಟಿ ಮಾಡಲು ರೈತ ಮುಖಂಡರು ಮುಂದಾಗಿದ್ದರು. ಆದ್ರೆ ಅದು ಸಾಧ್ಯವಾಗದೆ ರೈತರು ಸಿಎಂ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಸಚಿವ ಜಗದೀಶ ಇದೇ ಮಾರ್ಗವಾಗಿ ಬರುತ್ತಿರುವ ಬರುವ ಸುಳಿವು ಅರಿತ ರೈತರು ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ರೈತ ಮುಖಂಡರನ್ನು ತಡೆದು ಕಾರು ಹೋಗಲು ಅನುವು
Laxmi News 24×7