Breaking News

ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ

Spread the love

ಹಾವೇರಿ: ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ. ಆ ಸೌಂದರ್ಯವನ್ನ ಕಣ್ತುಂಬಿಕೊಳ್ಳೋದೆ ಕಣ್ಣಿಗೆ ಹಬ್ಬ, ಮನಸ್ಸಿಗೆ ಆನಂದ. ಇಲ್ಲಿನ ಸೌಂದರ್ಯಕ್ಕೆ ಮನಸೋತ ಜನ, ಧುಮ್ಮಿಕ್ಕುವ ಜಲಪಾತ ನೋಡಲು ಸಾಲುಗಟ್ಟಿ ಆಗಮಿಸುತ್ತಿದ್ದಾರೆ.

ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮದಗಮಾಸೂರು ಕೆರೆಯ ಬಳಿ ಜಲಪಾತ ಉಂಟಾಗಿದ್ದು, ಕಣ್ತುಂಬಿಕೊಳ್ಳಲು ಸಚಿವರು ಸೇರಿದಂತೆ ಜನರು ಮುಗಿಬೀಳುತ್ತಿದ್ದಾರೆ. ಮದಗಮಾಸೂರು ಕೆರೆ ಐತಿಹಾಸಿಕವಾಗಿ ಸಾಕಷ್ಟು ಮಹತ್ವ ಪಡೆದಿದೆ. ಕೆರೆಯ ಕುರಿತು ಜಾನಪದೀಯರು ಮಾಯದಂಥಾ ಮಳೆ ಬಂತಣ್ಣ, ಮದಗದ ಕೆರೆಗೆ ಎಂದು ಹಾಡು ಕಟ್ಟಿದ್ದಾರೆ. ಅಂಥ ಮದಗಮಾಸೂರು ಕೆರೆಗೆ ಈಗ ಮಾಯದಂಥಾ ಮಳೆ ಬಂದಿದೆ.

ಮಳೆಯ ಪರಿಣಾಮ ಕೆರೆ ಭರಪೂರ ತುಂಬಿಕೊಂಡಿದೆ.ಇಲ್ಲಿನ ಜಲಧಾರೆ, ಹಸಿರ ಸೌಂದರ್ಯಕ್ಕೆ ಮನಸೋತು ಹಲವರು ಫೋಟೋ ಶೂಟ್ ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಕೆಲವರು ಕುಟುಂಬ ಸಮೇತ, ಕೆಲವರು ಸ್ನೇಹಿತರೊಂದಿಗೆ ಇಲ್ಲಿಗೆ ಬಂದು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಮಳೆಗಾಲದ ಇಲ್ಲಿನ ಸೌಂದರ್ಯಕ್ಕೆ ಫುಲ್ ಫಿದಾ ಆಗಿದ್ದಾರೆ.


Spread the love

About Laxminews 24x7

Check Also

ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ

Spread the love ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ ಬೆಳಗಾವಿಯ ರಾಮತೀರ್ಥ ನಗರದ ಸುರೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ