ಬೆಂಗಳೂರು: ಬುಲೆಟ್ ಬೈಕ್ ಮಾಲೀಕನೊಬ್ಬ ಬರೋಬ್ಬರಿ 58 ಸಾವಿರದ 200 ರೂಪಾಯಿ ದಂಡ ಕಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಆಡುಗೊಡಿಯಲ್ಲಿ ನಡೆದಿದೆ.
ಸಿಗ್ನಲ್ ಜಂಪ್, ಹೆಲ್ಮೆಟ್ ಇಲ್ಲದೇ ಸಂಚಾರ, ಒನ್ ವೇ ಹೀಗೆ ಸುಮಾರು 103 ಬಾರಿ ಬೈಕ್ ಸವಾರ ರಾಜೇಶ್ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾನೆ. ಈ ಕಾರಣದಿಂದ ಸಂಚಾರಿ ಪೊಲೀಸರು ಆತನಿಗೆ ನೋಟಿಸ್ ನೀಡಿದ್ದರು. ಪರಿಣಾಮ ಇಂದು ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಗೆ ಬಂದ ರಾಜೇಶ್ ಬರೋಬ್ಬರಿ 58 ಸಾವಿರದ 200 ರೂಪಾಯಿ ದಂಡ ಕಟ್ಟಿದ್ದಾರೆ.