Breaking News

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ  ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ   ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ :ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದವನ್ನು ಬಗೆಹರಿಸಲು  ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಸಭೆ ಆರಂಭವಾಗಿದೆ.

ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡವ ವಿಚಾರವಾಗಿ ಜಿಲ್ಲಾಡಳತದೊಂದಿಗೆ ಸಭೆ ನಡೆಸುತ್ತಿದ್ದೆನೆ. ಶನಿವಾರ ಸಚಿವ ಈಶ್ವರಪ್ಪ ಪೀರನವಾಡಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಎಲ್ಲರ ವಿಶ್ವಾಸ ತೆಗೆದುಕೊಂಡು ಸಮಸ್ಯೆ ಬಗೆ ಹರಿಸಲು ಸೂಚಿಸಿದ್ದಾರೆ. ಆದ ಕಾರಣ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ರೇವಣ್ಣ, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ  ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ   ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ  ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ