Breaking News

ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ

Spread the love

ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ ಇದೇ 29 ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ  ಪ್ರತಿಭಟನಾಕಾರರನ್ನುದ್ದೇಶಿಸಿ ಸಚಿವ ರಮೇಶ್ ಮಾತನಾಡಿ,  ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಾನೇ ಮೊದಲು ಸರ್ಕಾರಕ್ಕೆ 2018ರಲ್ಲಿ ಪತ್ರ ಬರೆದಿದ್ದೆ ಎಂದು ತಿಳಿಸಿದರು.

ರಸ್ತೆ ಅಗಲೀಕರಣ ವೇಳೆ ಸಮಸ್ಯೆಯಾಗಲಿದೆ ಎಂಬ ಕಾರಣ ಆಗ ಪ್ರತಿಷ್ಠಾನೆ ಸಾಧ್ಯ ಆಗಿರಲಿಲ್ಲ. ಕಾನೂನು ತೊಡಕು ಇರುವುದರಿಂದ  ಚರ್ಚೆಯಾಗಬೇಕಿದೆ. ಆದ ಕಾರಣ ಸಚಿವ ಈಶ್ವರಪ್ಪನವರು ಸಹ 29ಕ್ಕೆ ಆಗಮಿಸಲಿದ್ದಾರೆ ಎಂದರು.

ಮುಖಂಡರು ಪೀರನವಾಡಿ ವೃತ್ತದಲ್ಲಿಯೇ ಪ್ರತಿಷ್ಠಾಪನೆಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಕಾನೂನು ಸಮಸ್ಯೆಯಿಂದ ಆಗುತ್ತಿಲ್ಲ. 29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ ಮಾಡಲಾಗುತ್ತದೆ. ಎಲ್ಲರ ವಿಶ್ವಾಸ ತೆಗೆದುಕೊಂಡು ನಿರ್ಧಾರ  ತೆಗೆದುಕೊಳ್ಳಲಾಗುತ್ತದೆ. ನಮಗೆ ಸಹಕಾರ ಕೊಡಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ