ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ ಕೆಲವೊಂದು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಸೆಪ್ಟೆಂಬರ್ 1 ರಿಂದ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ.
ಈ ಮೂಲಕ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಾಮೂಲಿ ಪೂಜೆ ನಡೆಯಲಿದೆ. ಅದು ಕೂಡ ಕೊರೊನಾ ಮಾರ್ಗಸೂಚಿ ಅನ್ವಯವೇ ಎಲ್ಲಾ ಸೇವೆಗಳು ಲಭ್ಯವಾಗಲಿವೆಹೀಗಾಗಿ ಸೆಪ್ಟೆಂಬರ್ 1ರಿಂದಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ.
ಈಗಿದ್ದ ಸೀಮಿತ ಸೇವೆಗಳ ಜೊತೆಗೆ ಹೆಚ್ಚುವರಿ ಸೇವೆಗಳ ಆರಂಭ ಮಾಡುವ ಸಾಧ್ಯತೆಯೂ ಇದೆ. ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆ ಆರಂಭಕ್ಕೆ ಚಿಂತನೆ ಮಾಡಲಾಗಿದೆ. ಈ ವಿಚಾರವನ್ನು ಮುಜರಾಯಿ ಇಲಾಖೆ ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದೆ. ಸರ್ಕಾರ ಒಪ್ಪಿದ್ರೆ ಸದ್ಯದಲ್ಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗೆ ಅವಕಾಶ ನೀಡಲಾಗುವುದು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??