ಬೆಂಗಳೂರು: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿ ತಾಲ್ಲೂಕಿನ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಪ್ರತಿಕ್ರಿಯಿಸಿದ ಸಿಎಂ ಅವರು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಎಂದು ಡಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಎರಡು ಸಮಾಜದ ಮುಖಂಡರನ್ನು ಕರೆಸಿ ಸಭೆ ನಡೆಸಿ, ಶಾಂತಿ ಕಾಪಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.