Breaking News

ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ

Spread the love

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ.

‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ‍ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು.

‘ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ