Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಆತ್ಮಹತ್ಯೆಗೆ ಶರಣಾಗಬೇಡಿ, ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ

ಆತ್ಮಹತ್ಯೆಗೆ ಶರಣಾಗಬೇಡಿ, ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ

Spread the love

ಗೋಕಾಕ : ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೇಯ ಕೃತ್ಯಕ್ಕೆ ರೈತ ಸಮುದಾಯ ಕೈ ಹಾಕಬಾರದು. ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.

ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಚನ್ನಪ್ಪ ಲಕ್ಷ್ಮಣ ಚಿಕ್ಕೋಡಿ ಕುಟುಂಬಕ್ಕೆ ಕೃಷಿ ಇಲಾಖೆಯ ಪರಿಹಾರ ಧನದ ಪ್ರಮಾಣ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆ ನೀಡಿರುವ 5 ಲಕ್ಷ ರೂ.ಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗ ಮಾಡಿಕೊಳ್ಳುವಂತೆ ಮೃತ ಕುಟುಂಬ ವರ್ಗಕ್ಕೆ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ನಾಗಪ್ಪ ಶೇಖರಗೋಳ, ಗೋಕಾಕ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ, ಮೂಡಲಗಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಣಜಿ, ಖಜಾಂಚಿ ಎ.ಎಂ.ಮೋಡಿ, ನ್ಯಾಯವಾದಿ ಮುತ್ತು ಕುಳ್ಳೂರ, ಪರಸಪ್ಪ ಕುಳ್ಳೂರ, ಮುಂತಾದವರು ಉಪಸ್ಥಿತರಿದ್ದರು.

ಸಾಲದ ಬಾಧೆಯಿಂದ ಮನನೊಂದು 2019ರ ಅಗಸ್ಟ್ 1 ರಂದು ಚನ್ನಪ್ಪ ಚಿಕ್ಕೋಡಿ(28) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೇ ಸಂದರ್ಭದಲ್ಲಿ ಗುಜನಟ್ಟಿ ಗ್ರಾಮದ ಭೀಮಪ್ಪ ಕಲ್ಲಪ್ಪ ಬಿ.ಪಾಟೀಲ @ ಮುಶೆಪ್ಪಗೋಳ(45) ಎಂಬುವವರು ಸಾಲದ ಬಾಧೆಯಿಂದಾಗಿ 2019ರ ನವ್ಹೆಂಬರ 6 ರಂದು ಬಾಂವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಕುಟುಂಬ ವರ್ಗಕ್ಕೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂ.ಗಳ ಪರಿಹಾರ ಧನದ ಪ್ರಮಾಣ ಪತ್ರವನ್ನು ಯುವ ಮುಖಂಡ ನಾಗಪ್ಪ ಶೇಖರಗೋಳ ಅವರು ವಿತರಿಸಿದರು. ಅಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ