Breaking News

ಇ-ಲೋಕ ಅದಾಲತ್‌ ಸೆ.7ರಿಂದ

Spread the love

ಬೆಳಗಾವಿ: ‘ಕೋವಿಡ್-19 ಕಾರಣದಿಂದಾಗಿ ಇ-ಲೋಕ ಅದಾಲತ್ ನಡೆಸಲಾಗುತ್ತಿದೆ. ಎಲ್ಲರಿಗೂ ಸಮಾನ ಅವಕಾಶ ಹಾಗೂ ನ್ಯಾಯ ಸಿಗಬೇಕು ಎನ್ನುವುದು ಮುಖ್ಯ ಉದ್ದೇಶವಾಗಿದೆ’ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಾಧೀಶ ಅರವಿಂದ ಕುಮಾರ ಹೇಳಿದರು.

ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು.

‘ಇ-ಲೋಕ ಅದಾಲತ್‌ ಬಗ್ಗೆ ಇಲ್ಲಿವರೆಗೆ ನಾಲ್ಕು ಸಭೆಗಳನ್ನು ನಡೆಸಿದ್ದೇವೆ. ವಿಮಾ ಕಂಪನಿಗಳಿಗೆ ಸಂಬಂಧಿಸಿದ ವ್ಯಾಜ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅಪಘಾತದಲ್ಲಿ ವ್ಯಕ್ತಿ ಸಾವಿಗೀಡಾಗಿದ್ದರೆ, ಕುಟುಂಬಕ್ಕೆ ವಿಮೆಯ ಹಣ ಸಿಗುವಂತೆ ಮಾಡುವವುದು ಅದಾಲತ್‌ನ ಗುರಿಯಾಗಿದೆ’ ಎಂದು ಮಾಹಿತಿ ನೀಡಿದರು.

‘ಪ್ರತಿ ಜಿಲ್ಲಾ ಮತ್ತು ತಾಲ್ಲೂಕುಗಳಲ್ಲೂ ಅದಾಲತ್ ನಡೆಸಬೇಕು’ ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಸಿ.ಎಂ. ಜೋಶಿ, ‘ಇ-ಲೋಕ ಅದಾಲತ್ ಸೆ. 7ರಿಂದ 19ರವರೆಗೆ ನಡೆಯಲಿದೆ. 6ಸಾವಿರ ಪ್ರಕರಣಗಳಲ್ಲಿ 3ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

‘ಹೆಚ್ಚಿನ ಪ್ರಕರಣಗಳನ್ನು ಅದಾಲತ್ ಮೂಲಕ ಬಗೆಹರಿಸಲು ಪ್ರಯತ್ನಿಸಲಾಗುವುದು. ವಿಡಿಯೊ ಕಾನ್ಫರೆನ್ಸ್ ಮೂಲಕ ಲೋಕ ಅದಾಲತ್ ನಡೆಸಲು ವಕೀಲರಿಗೆ ತರಬೇತಿ ನೀಡಲಾಗಿದೆ. ವಕೀಲರು ಹಾಗೂ ಪ್ರಕರಣ ದಾಖಲಿಸಿದವರು ನ್ಯಾಯಾಲಕ್ಕೆ ಬಂದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯ ಆಗುವುದಿಲ್ಲ. ಆದ್ದರಿಂದ ಇ-ಲೋಕ ಅದಾಲತ್‌ ಮೊರೆ ಹೋಗಲಾಗುತ್ತಿದೆ’ ಎಂದರು.

ಜಿಲ್ಲಾ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟೇಶ ಇದ್ದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ