Breaking News

ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ

Spread the love

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ ಸಂಗತಿಗಳ ಬಗ್ಗೆ ರಾಜ್ಯಪಾಲರ ಜತೆ ವಿಚಾರ ವಿನಿಮಯ ಮಾಡಿಕೊಂಡರು.

ಇಡೀ ದೇಶದಲ್ಲಿಯೇ ಇತರೆ ರಾಜ್ಯಗಳಿಗಿಂತ ಮೊದಲು ಶಿಕ್ಷಣ ನೀತಿಯನ್ನು ಜಾರಿ ಮಾಡುವುದು ಸರಕಾರದ ಉದ್ದೇಶವಾಗಿದೆ. ಅದಕ್ಕಾಗಿ ಬೇಕಾಗಿರುವ ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

ಇದುವರೆಗೂ ಕಾರ್ಯಪಡೆ ಹಾಗು ಕಾರ್ಯಪಡೆಯ ಉಪ ಸಮಿತಿಗಳು ನೀಡಿರುವ ಸಲಹೆಗಳು ಮತ್ತು ವರದಿಗಳು ಸೇರಿದಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿರುವ ಅಂಶಗಳ ಬಗ್ಗೆ ಉಪ ಮುಖ್ಯಮಂತ್ರಿ ಅವರು ರಾಜ್ಯಪಾಲರಿಗೆ ವಿವರಿಸಿದರು.

ನೀತಿಯಲ್ಲಿ ಅಡಕವಾಗಿರುವ ಪ್ರಮುಖ ವಿಷಯಗಳು, ಅವುಗಳ ಜಾರಿಯಿಂದ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಆಗಲಿರುವ ಮಹತ್ವದ ಬದಲಾವಣೆಗಳ ಬಗ್ಗೆಯೂ ಅವರು ರಾಜ್ಯಪಾಲರಿಗೆ ವಿವರಣೆ ನೀಡಿದರಲ್ಲದೆ, ಈ ಸಂಬಂಧ ರಾಜ್ಯ ಸರಕಾರ ತರಲಿಚ್ಛಿಸಿರುವ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಬದಲಾವಣೆಗಳ ಬಗ್ಗೆಯೂ ಮಾಹಿತಿ ನೀಡಿದರು.

ಸಲಹೆ ನೀಡಿದ ರಾಜ್ಯಪಾಲರು:

ಇದೇ ವೇಳೆ ಶಿಕ್ಷಣ ನೀತಿ ಜಾರಿಯ ನಿಟ್ಟಿನಲ್ಲಿ ವೇಗವಾಗಿ ಹೆಜ್ಜೆಗಳನ್ನು ಇಡುತ್ತಿರುವ ಸರಕಾರದ ಬಗ್ಗೆ ಹರ್ಷ ವ್ಯಕ್ತಪಡಿಸಿದ ರಾಜ್ಯಪಾಲರು, ಕೆಲ ಮಹತ್ವದ ಸಲಹೆಗಳನ್ನು ನೀಡಿದರು. ಜತೆಗೆ, ಡಿಸಿಎಂ ಜತೆಯಲ್ಲೇ ತಮ್ಮನ್ನು ಭೇಟಿಯಾಗಿದ್ದ ಶಿಕ್ಷಣನೀತಿ ನಿರೂಪಣಾ ಸಮಿತಿ ಸದಸ್ಯ ಹಾಗೂ ಅಜೀಂ ಪ್ರೇಮ್ʼಜೀ ವಿವಿಯ ಉಪ ಕುಲಪತಿ ಪ್ರೊ. ಅನುರಾಗ್ ಬೇಹರ್ ಅವರಿಂದ ನೀತಿಯಲ್ಲಿರುವ ಮತ್ತಷ್ಟು ಅಂಶಗಳ ಬಗ್ಗೆ ವಿವರಣೆ ಪಡೆದರು. ಜತೆಗೆ, ಡಿಸಿಎಂ ಅವರಿಗೆ ಕೆಲ ಮುಖ್ಯ ಸಲಹೆಗಳನ್ನೂ ನೀಡಿದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ:ಹೊರಟ್ಟಿ

Spread the loveಬೆಂಗಳೂರು, ಡಿಸೆಂಬರ್ 23: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ