Breaking News

11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

Spread the love

ಬೆಳಗಾವಿ: ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ.

ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ‌ ಮಾಡಲು ಸಹಾ  ಅನುಮೋದನೆ ನೀಡಲಾಗಿದೆ.

ಹಾಗೆಯೇ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಲ್ಲಿ ಅನುಷ್ಠಾನಕ್ಕೆ ತರಲಾಗುವ ವಿವಿಧ 7 ನೀರಾವರಿ ಯೋಜನೆ ಗಳಿಗೂ ಸಹಾ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮದ ಅಂದಾಜು ಪರಿಶೀಲನಾ ಸಭೆ ಅನುಮತಿ ನೀಡಿದೆ.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ