ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಲವು ಸಚಿವರು, ಶಾಸಕರು, ವಿಪಕ್ಷ ನಾಯಕ ಸೇರಿದಂತೆ ರಾಜಕೀಯ ಮುಖಂಡರನ್ನೂ ಕೊವಿಡ್ ವೈರಸ್ ಕಾಡುತ್ತಿದೆ. ಈಗಾಗಲೇ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತ: ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, ನಾನು ಕೊವಿಡ್ ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ನಿಮ್ಮೆಲ್ಲರ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಗುಣಮುಖನಾಗಿ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.
Laxmi News 24×7