Breaking News

ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಭಾರೀ ಮಳೆಯಾಗಲಿದೆ…..!

Spread the love

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರ ಉತ್ತಮ ಮಳೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿರುವ ಮಳೆರಾಯ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದಾನೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಮಳೆಯಾಗಲಿದೆ.  ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು,  ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ನಿರೀಕ್ಷೆ  ಮಾಡಲಾಗಿದೆ‌.

ಎಲ್ಲಾ ಭಾಗದಲ್ಲಿ ಸೆ.2 ಮತ್ತು 3ರಂದು ಉತ್ತಮ‌ ಮಳೆ ನಿರೀಕ್ಷೆ ಮಾಡಲಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

 

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ