ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು.
ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು.
ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತುಳಸಿ ಗಿಡ ನೆಟ್ಟು ಪೂಜೆ ಸಲ್ಲಿಸಿದರು.
ಮನೆ ಮನೆಗಳಲ್ಲಿ ಆಗಸ್ಟ್ 30 ರಂದು ಪ್ರಕೃತಿ ಪೂಜೆ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕರು ಕರೆ ನೀಡಿದ್ದನ್ನು ಸ್ಮರಿಸಬಹುದು.