ಬೆಳಗಾವಿ-:ಬೆಳಗಾವಿ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಸರ್ಕಾರದಲ್ಲಿ ಲಾಟ್ರಿ ಮೇಲೆ ಲಾಟ್ರಿ ಹೊಡೆಯುತ್ತಲೇ ಬಂದಿದ್ದು,ಇವರಿಗೆ ಸರ್ಕಾರ ಉನ್ನತ ಹುದ್ದೆ ನೀಡಿ ಇಂದು ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಸರ್ಕಾರ ಇಂದು ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ಹಿಂದಕ್ಕೆ ಪಡೆದು ಇಂದು ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಅಧಿಕಾರಕ್ಕೆ ಬಂದಾಗ ಅನೇಕ ಹುದ್ದೆಗಳನ್ನು ಪಡೆದುಕೊಂಡಿದ್ದರು,ಬೆಳಗಾವಿ ಬುಡಾ ಅದ್ಯಕ್ಚ,ಅರಣ್ಯ ನಿಗಮದ ಅದ್ಯಕ್ಷ,,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಮಾಡಿರುವ ಶಂಕರಗೌಡ ಪಾಟೀಲರು ಈಗ ಕರ್ನಾಟಕ ಸರ್ಕಾರದ ದೇಹಲಿಯ ವಿಶೇಷ ಪ್ರತಿನಿಧಿಯಾಗಿದ್ದಾರೆ.
ಹಳ್ಳಿಯಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಶಂಕರಗೌಡ ಪಾಟೀಲರು,ಈಗ ದೆಹಲಿ ಮುಟ್ಟಿದ್ದು,ಇವರು ಮುಖ್ಯಮಂತ್ರಿಗಳ ಪರಮ ಆಪ್ತರು ಎನ್ನುವದು ವಿಶೇಷ
Laxmi News 24×7