Breaking News

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

Spread the love

ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಝೀರೋ ಅಂತೀರಾ. ಹಾಗೇ ಸ್ಯಾಂಡಲ್‍ವುಡ್ ಕೂಡ ಎಂದರು.

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರನ್ನು ಹೇಳುತ್ತಿರುವುದು ನನಗೆ ತುಂಬಾ ಬೇಸರವಾಯಿತು. ಚಿರು ಸತ್ತು ಮೂರು ತಿಂಗಳು ಆಗಿದೆ. ಅವನು ಎಲ್ಲಿದ್ದಾನೋ, ಹೇಗಿದ್ದಾನೋ ಗೊತ್ತಿಲ್ಲ. ಒಂದು ವೇಳೆ ಈ ಕೇಸ್ ಆಗಿ ಸಾಬೀತಾಯಿತು ಅಂದರೆ ಅವನಿಗೆ ಶಿಕ್ಷೆ ಕೊಡಲು ಆಗುತ್ತಾ. ಸತ್ತೋನು ಕೊಲೆಗಾರನಾದರೂ ನಾವು ವರ್ಷದ ತಿಥಿ ಮಾಡುತ್ತೇವೆ. ಇದನ್ನು ನಮ್ಮ ತಂದೆ-ತಾಯಿ ಹೇಳಿಕೊಟ್ಟಿದ್ದಾರೆ. ಅವನು ಒಳ್ಳೆಯವನು ಕೆಟ್ಟೋನು ಎಂದು ನೋಡುವುದಿಲ್ಲ. ಸತ್ತ ಮೇಲೆ ಅವರ ಬಗ್ಗೆ ಒಳ್ಳೆಯ ಮಾತನಾಡೋಣ. ದಯವಿಟ್ಟು ಕೆಟ್ಟದಂತೂ ಮಾತನಾಡಬೇಡಿ ಎಂದು ದರ್ಶನ್ ಮನವಿ ಮಾಡಿಕೊಂಡರು.

ನಾನು ಕೂಡ ಈ ಫೀಲ್ಡ್‌ಗೆ ಬಂದು 28 ವರ್ಷ ಆಯಿತು. ಲೈಟ್ ಬಾಯ್‍ಯಿಂದ ಇಲ್ಲಿವರೆಗೂ ಬಂದಿದ್ದೇನೆ. ಆದರೆ ಇದುವರೆಗೂ ನಮಗೆ ಈ ರೀತಿ ಅನುಭವ ಆಗಿಲ್ಲ. ಸ್ಯಾಂಡಲ್‍ವುಡ್‍ನಲ್ಲಿ ಇದುವರೆಗೂ ಈ ಬಗ್ಗೆ ನಾನು ಕೇಳಿಲ್ಲ ನೋಡಿಲ್ಲ. ಡ್ರಗ್ಸ್ ಕೇಸ್ ಇಡೀ ಸ್ಯಾಂಡಲ್‍ವುಡ್‍ಗೆ ಮಾತ್ರ ಅಲ್ಲ. ಇಡೀ ಕರ್ನಾಟಕಕ್ಕೆ ಕೆಟ್ಟ ಹೆಸರು ಎಂದು ನಟ ದರ್ಶನ್ ಹೇಳಿದರು


Spread the love

About Laxminews 24x7

Check Also

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

Spread the love ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ