Breaking News

ಜಿಲ್ಲೆಯ ಪ್ರತಿಯೊಂದು ಇಲಾಖೆಗಳ ವಸತಿ ನಿಯಲಗಳನ್ನು ಪುನರ್ ಪ್ರಾರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಬಿಎಸ್ ವೈಗೆ ಪತ್ರ ಬರೆದ ಶಾಸಕ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಸ್ಯಾನಿಟೈಸರ್ ದಿಂದ ಶುಚಿತ್ವಗೊಳಿಸಿ ಪುನರ್ ಪ್ರಾರಂಭಿಸುವಂತೆ ಒತ್ತಾಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ, ಸತೀಶ್ ಜಾರಕಿಹೊಳಿ ಅವರು ಮನವಿ ಸಲ್ಲಿಸಿದ್ದಾರೆ.

ಕೋವಿಡ್ -19 ರ ಹೆಚ್ಚಳದಿಂದಾಗಿ ರಾಜ್ಯದಲ್ಲಿನ ಮೆಟ್ರಿಕ್ ನಂತರದ ಎಲ್ಲ ವಸತಿ ನಿಲಯಗಳನ್ನು ಕೋವಿಡ್ -19 ಚಿಕಿತ್ಸಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಆದರೆ ವಿವಿಧ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಸಮೀಪಿಸಿರುವುದರಿಂದ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ವಸತಿ ನಿಲಯಗಳನ್ನು ಆರಂಭಿಸಬೇಕಾಗಿದೆ.

ಆದ ಕಾರಣ ವಸತಿ ನಿಲಯಗಳನ್ನು ಸ್ಯಾನಿಟೈಸರ್ ದಿಂದ ಶುಚಿತ್ವಗೊಳಿ, ಪುನರ್ ಪ್ರಾರಂಭಿಸಬೇಕು ಎಂದು  ವಿದ್ಯಾರ್ಥಿ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರು ಮನವಿ ಮಾಡಿಕೊಂಡಿದ್ದಾರೆ. ಆದ್ದರಿಂದ ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಯ ಪ್ರತಿಯೊಂದು ಇಲಾಖೆಗಳ ವಸತಿ ನಿಯಲಗಳನ್ನು ಪುನರ್ ಪ್ರಾರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು  ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

 

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ