ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.
ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. ಹಿರಿಯ ಮುತ್ಸದ್ಧಿ ಮತ್ತು ಮೌಲ್ಯಾಧಾರಿತ ವ್ಯಕ್ತಿಯನ್ನು ಕಳೆದುಕೊಂಡು ಭಾರತ ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಭಾರತ ರತ್ನ, ಪದ್ಮವಿಭೂಷಣ ಸೇರಿದಂತೆ ಹಲವು ಉನ್ನತ ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದ್ದವು. ಇವರ ಸ್ಮರಣ ಶಕ್ತಿ ಎಂತಹವರನ್ನು ವಿಸ್ಮಯಗೊಳಿಸುತ್ತಿತ್ತು. ಅಂತಹ ಅಪಾರ ಜ್ಞಾನಶಕ್ತಿಯನ್ನು ಹೊಂದಿದ್ದರಲ್ಲದೇ ಹಲವು ಭಾಷೆಗಳಲ್ಲಿ ಪಾಂಡಿತ್ಯ ಸಾಧಿಸಿದ್ದರು. ದೇಶಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಪ್ರಣಬ್ ಮುಖರ್ಜಿ ಒಬ್ಬರಾಗಿದ್ದರು ಎಂದು ಶ್ರೀ ಸಂತೋಷ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದರು.