Breaking News
Home / ಜಿಲ್ಲೆ / ಹಾಸನ / ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್……………..

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್……………..

Spread the love

ಹಾಸನ: ಕಳೆದ ಭಾನುವಾರದಂದು ಚನ್ನರಾಯಪಟ್ಟಣದಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಎರಡೇ ದಿನದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಆರೋಪಿಯು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ.

ಈ ಸಂದರ್ಭದಲ್ಲಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದು ಆರೋಪಿಯನ್ನು ಹಿಡಿದಿದ್ದಾರೆ. ಇದೊಂದು ಕಾರ್ಯವು ರೌಡಿ ಅಸಾಮಿಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಗಂಟೆಯನ್ನು ಬಾರಿಸಿದಂತಾಗಿದೆ.

ಮುರುಳಿಧರ್ (71), ಉಮಾದೇವಿ (67) ಕೊಲೆಯಾದ ವೃದ್ಧ ದಂಪತಿ. ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರನ್ನು ಕೊಲೆ ಮಾಡಲಾಗಿತ್ತು. ಮನೆಯನ್ನು ದರೋಡೆ ಮಾಡಲು ಬಂದು, ದಂಪತಿಯನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು.

ಮುರುಳಿಧರ್ ಅವರ ತಂದೆ ಕೃಷ್ಣಮೂರ್ತಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಹೀಗಾಗಿ ಸರ್ಕಾರ ಅವರಿಗೆ 80 ಎಕರೆ ಜಮೀನು ನೀಡಿತ್ತು. ಮುರುಳಿಧರ್ ದಂಪತಿಗೆ ಮಕ್ಕಳು ಇರಲಿಲ್ಲ. ಜೊತೆಗೆ ಮುರುಳಿಧರ್ ಬಿ.ಎಸ್ಸಿ ಅರ್ಗಿಕಲ್ಚರ್ ವ್ಯಾಸಂಗ ಮಾಡಿದ್ದರು. ಕೃಷಿಯಲ್ಲಿ ಆಸಕ್ತಿ ಹೊಂದಿದ್ದರಿಂದ ಗ್ರಾಮದ ಹೊರಗಿರುವ 80 ಎಕರೆ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ಅಲ್ಲೇ ದಂಪತಿ ವಾಸವಿದ್ದರು.

ಇತ್ತೀಚೆಗೆ ಅವರು ತಮ್ಮ ಜಮೀನನ್ನು ಮಾರಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಅವರು ಮನೆಯಲ್ಲಿ ಜಮೀನು ಮಾರಿರುವ ದುಡ್ಡನ್ನು ಇಟ್ಟಿಕೊಂಡಿದ್ದಾರೆ ಎಂದು ಯಾರೋ ಕಿಡಿಗೇಡಿಗಳು ಮನೆಗೆ ನುಗ್ಗಿದ್ದಾರೆ. ಹಣಕ್ಕಾಗಿ ದಂಪತಿಯನ್ನು ಕೊಲೆ ಮಾಡಿ ಮನೆ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ