Breaking News

ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ………..

Spread the love

ಚಿಕ್ಕಬಳ್ಳಾಪುರ: ಟೋಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕರ್ನಾಟಕ ಆಂಧ್ರ ಗಡಿಭಾಗದ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಬಂದ ಸ್ಕಾರ್ಪಿಯೋ ಕಾರು, ಸರದಿ ಸಾಲಿನಲ್ಲಿದ್ದ ಸ್ವಿಫ್ಟ್ ಡಿಜೈರ್ ಹಾಗೂ ಹುಂಡೈ ಕ್ರೆಟಾ ಕಾರಿಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ನಂತರ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದೆ.

ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೂರು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಹಾಗೆ ಸ್ಕಾರ್ಪಿಯೋ ಕಾರು ಚಾಲಕ ವೈಭವ್ ಕುಮಾರ್ ಕಾರು ಚಲಾಯಿಸುತ್ತಿದ್ದು, ಕಾರಿನಲ್ಲಿ ಬೆಂಗಳೂರಿನ ಪದ್ಮನಾಭನಗರದ ನಿವಾಸಿಗಳಾದ ಚಂದ್ರಕಲಾ ಹಾಗೂ ನಾಗ ಇದ್ದರು.

ಕಾರಿನಲ್ಲಿ ಕದಿರಿಗೆ ಪ್ರಯಾಣ ಮಾಡುತ್ತಿದ್ದರು. ಸಿನಿಮಾ ಸ್ಟೈಲ್‍ನಲಿ ಸ್ಕಾರ್ಪಿಯೋ ಕಾರು ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸದ್ಯ ಬಾಗೇಪಲ್ಲಿ ಪಿಎಸ್‍ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Spread the loveಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ