Breaking News

ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ

Spread the love

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿ, ಸಂಗೊಳ್ಳಿ ರಾಯಣ್ಣ  ಪ್ರಥಮ ದರ್ಜೆ ಕಾಲೇಜ್ ಸುಸಜ್ಜಿತವಾದ ಮೂಲ ಸೌಕರ್ಯದೊಂದಿಗೆ  ಗ್ರಾಮೀಣ ಪ್ರತಿಭೆಗಳ ಉನ್ನತ ವ್ಯಾಸಂಗದ ಕನಸನ್ನು ನನಸು ಮಾಡುವ ಉದ್ದೇಶ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹೊಂದಿದೆ. ಸುಮಾರು 9.8 ಕೋಟಿ ವೆಚ್ಚದಲ್ಲಿ  ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಪ್ರೊ.ಎಸ್.ಎಂ.ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ. ಡಿ.ಎನ್.ಪಾಟೀಲ, ಸಿಂಡಿಕೇಟ್ ಸದಸ್ಯ ಡಾ.ಆನಂದ ಹೊಸೂರ,  ಕಾಲೇಜು ಅಭಿವೃಧ್ಧಿ ಮಂಡಳಿಯ ನಿರ್ದೇಶಕ ಪ್ರೊ. ಹೆಚ್.ವೈ. ಕಾಂಬಳೆ, ಐಕ್ಯೂಎಸಿ ನಿರ್ದೇಶಕ ಪ್ರೊ.ಶಿವಾನಂದ ಗೋರನಾಳೆ, ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಎಂ,ಯರಿಸ್ವಾಮಿ, ಪ್ರಾಚಾರ್ಯ ಡಾ.ಎಂ.ಜಯಪ್ಪ, ಉಪಪ್ರಾಚಾರ್ಯ ಅನಿಲ ರಾಮದುರ್ಗ, ಗುತ್ತಿಗೆದಾರ ಸಮೀರ ಶಿರಗುಪ್ಪಿ, ಬಿ.ಎನ್. ಶೆಟ್ಟರ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ