Breaking News

ಮುಂದಿನ ತಿಂಗಳು ಗ್ರಾಮ ಪಂಚಾಯತಿ ಚುನಾವಣೆ

Spread the love

ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ.

ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬಹುದು. ಸಾರ್ವತ್ರಿಕವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವ ಬದಲು ಬಹುಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚುನಾವಣಾ ಆಯೋಗಕ್ಕೆ ಜಿಲ್ಲಾಧಿಕಾರಿಗಳು ಈ ಕುರಿತಾಗಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಕೊರೋನಾ ನಿಯಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮಕೈಗೊಂಡಿದೆ. ಮೀಸಲಾತಿ ಪಟ್ಟಿ ಸಿದ್ದವಾಗಿದ್ದು ಎಲ್ಲ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಮೀಸಲಾತಿ ಅಂತಿಮಗೊಂಡು, ಮತದಾರರ ಪಟ್ಟಿ ಪ್ರಕಟವಾದ 45 ದಿನಗಳ ಒಳಗೆ ಚುನಾವಣೆ ನಡೆಸಬೇಕಿರುವುದರಿಂದ ಚುನಾವಣಾ ಆಯೋಗ ಸಿದ್ಧತೆ ಕೈಗೊಂಡಿದೆ.ಕೇಂದ್ರ ಚುನಾವಣಾ ಆಯೋಗ ಕೊರೋನಾ ಸಂದರ್ಭದಲ್ಲಿ ಚುನಾವಣೆ ನಡೆಸಲು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಇದರ ಅನ್ವಯ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಹೇಳಲಾಗಿದೆ


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ