Breaking News

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

Spread the love

ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ‌ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್‌ಸಿಂಗ್, ಹೆಚ್ಚುವರಿ ನಿವಾಸಿ ಆಯುಕ್ತ ಗುರುನೀತ್ ತೇಜ್, ಉಪ ನಿವಾಸಿ ಆಯುಕ್ತ ಎಚ್. ಪ್ರಸನ್ನ ಮತ್ತು ಅಧಿಕಾರಿಗಳು ಇದ್ದರು.

ಬಳಿಕ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

 


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ