ಕೊಡಗು : ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ ನಿವಾಸಿ ಭರತ್ ಮತ್ತು ಕುಶಾಲನಗರದ ನಿವಾಸಿ ಕುಟ್ಟನ್ ಮೃತಪ್ಪವರು ಎಂದು ಗುರುತಿಸಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ರಾಮನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಕ್ ಚಾಲಕ ಭರತ್ ಎಂಬುವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಕುಟ್ಟನ್ ಎಂಬುವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ನೀಡುವ ಮೊದಲೇ ಕುಟ್ಟನ್ ಸಾವನ್ನಪ್ಪಿದ್ದಾರೆ.
ಸದ್ಯ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗದ ಚಕ್ರವೇ ಮುರಿದು ಬಿದ್ದಿದ್ದರೆ, ಟಿಪ್ಪರ್ನ ಮುಂಭಾಗವು ಸಾಕಷ್ಟು ನಜ್ಜುಗುಜ್ಜಾಗಿದೆ.
ಘಟನೆ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.