ನವದೆಹಲಿ: ಅನ್ಲಾಕ್ನ ನಾಲ್ಕನೇ ಹಂತದಲ್ಲಿ, ಭಾರತೀಯ ರೈಲ್ವೆ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ಒಪ್ಪಿಗೆಯೊಂದಿಗೆ ಹೆಚ್ಚಿನ ವಿಶೇಷ ರೈಲುಗಳನ್ನು ಪರಿಚಯಿಸಲು ಯೋಜಿಸುತ್ತಿದೆ. ಆದರೆ ಸಾಮಾನ್ಯ ಸೇವೆಗಳನ್ನು ಪೂರ್ಣವಾಗಿ ಪುನರಾರಂಭಿಸುವುದು ಇನ್ನೂ ಬಹಳ ದೂರ ಎನ್ನಲಾಗುತ್ತಿದೆ. ಕೆಲವು ರಾಜ್ಯಗಳು, ವಿಶೇಷವಾಗಿ ಬಿಜೆಪಿಯೇತರ ಅಧಿಕಾರದಲ್ಲಿರುವ ಸರ್ಕಾರಗಳು ಅಂತರರಾಜ್ಯ ರೈಲುಗಳ ಪ್ರಯಾಣವನ್ನು ವಿರೋಧ ವ್ಯಕ್ತಪಡಿಸಿದ್ದಾವೆ.
ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾದಂತಹ ರಾಜ್ಯಗಳು ಹೆಚ್ಚಿನ ರೈಲುಗಳನ್ನು ಪರಿಚಯಿಸಲು ಹೆಚ್ಚು ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಸಾಂಕ್ರಾಮಿಕ ರೋಗವು ಕೊನೆಗೊಂಡ ನಂತರವೂ ಪೂರ್ಣ ಸೇವೆಗಳನ್ನು ಪುನರಾರಂಭಿಸಿದಾಗ ರೈಲ್ವೆ ತನ್ನ ಹವಾನಿಯಂತ್ರಿತ ಬೋಗಿಗಳಲ್ಲಿ ಕಂಬಳಿ, ದಿಂಬುಗಳು, ಕೈ ಟವೆಲ್ ಮತ್ತು ಹಾಳೆಗಳನ್ನು ನೀಡುವುದನ್ನು ನಿಲ್ಲಿಸಬಹುದು ಎಂದು ಇತ್ತೀಚೆಗೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಲಯ ಮತ್ತು ವಿಭಾಗೀಯ ಮಟ್ಟದಲ್ಲಿ ರೈಲು ಕಾರ್ಯಾಚರಣೆಯ ಉಸ್ತುವಾರಿ ರೈಲ್ವೆ ಅಧಿಕಾರಿಗಳು ಅಂತಿಮ ಯೋಜನೆಯನ್ನು ರೂಪಿಸಲು ರಾಜ್ಯಗಳೊಂದಿಗೆ ಮಾತನಾಡುತ್ತಿದ್ದು, ಹೆಚ್ಚುವರಿ ವಿಶೇಷ ರೈಲುಗಳ ಸಂಖ್ಯೆ “100 ಕ್ಕಿಂತ ಹೆಚ್ಚು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲವಾರು ನಿರ್ದಿಷ್ಟ ಮಾರ್ಗಗಳಲ್ಲಿ ಚಾಲ್ತಿಯಲ್ಲಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಅಂತ ತಿಳಿದು ಬಂದಿದೆ.