Breaking News

ರಾಜ್ಯದ ಭಕ್ತರಿಗೆ ಗುಡ್‌ ನ್ಯೂಸ್‌: ದೇವಸ್ಥಾನಗಳ ಎಲ್ಲ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ

Spread the love

ಬೆಂಗಳೂರು : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೆ.1 ರಿಂದಲೇ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ” ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳು/ಪೂಜಾ ಕೈಂಕರ್ಯಗಳು. ತೀರ್ಥ ವಿತರಣೆ ಹಾಗೂ ಜನಸಂದಣಿ ಸೇರುವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಕೆಲ ಇದೇ ವೇಳೆ ಕೆಲ ಷರತ್ತುಗಳೊಂದಿಗೆ ಸೆ.1ರಿಂದಲೇ ಜಾರಿಗೆ ಬರುವಂತೆ ದೇವಸ್ಥಾನದಲ್ಲಿ ಎಲ್ಲ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ಜಾತ್ರಾ ಉತ್ಸವಗಳು, ಬ್ರಹ್ಮ ರಥೋತ್ಸವ, ಪವಿತ್ರೋತ್ಸವ ಮುಂತಾದ ವಿಶೇಷ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಆದರೆ ಅವಶ್ಯಕ ಸಮಯದಲ್ಲಿ ಈ ಉತ್ಸವಗಳನ್ನು ಕೇವಲ ದೇವಾಲಯದ ಆಗಮಿಕರು, ತಂತ್ರಿಗಳು, ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ದೇವಾಲಯದ ಒಳಾಂಗಣದಲ್ಲಿ ಸಾರ್ವಜನಿಕ ಜನಸಂದಣಿ ಇಲ್ಲದಂತೆ ನಡೆಸಲು ಸೂಚಿಸಲಾಗಿದೆ.

 


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ