Breaking News

KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ವಿದ್ಯಾರ್ಥಿಗಳಿಗೆ ಹಳೇ ‘ಬಸ್ ಪಾಸ್’ ಬಳಸಿ ಪರೀಕ್ಷೆಗೆ ಹಾಜರಾಗಲು ಅನುಮತಿ

Spread the love

ಬೆಂಗಳೂರು : ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಆದ್ರೇ ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ ನೀಡಿದೆ. ಈ ಮೂಲಕ ಪದಪಿ, ಸ್ನಾತಕೋತ್ತರ ಪದವಿ, ವೃತ್ತಿಪರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತ್ತಕೋತ್ತರ ಪದವಿ, ವೃತ್ತಿಪರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿಗಧಿ ಪಡಿಸಲಾಗಿದೆ.

ಆದ್ರೇ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿರುವ ಕಾರಣ, ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ಕಾರಣಕ್ಕಾಗಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಜರಾಗಲು ಹಳೆಯ ವಿದ್ಯಾರ್ಥಿ ಬಸ್ ಪಾಸ್ ನಲ್ಲಿಯೇ ತೆರಳಲು ಅನುಮತಿ ನೀಡಲಾಗಿದೆ ಎಂಬುದಾಗಿ ತಿಳಿಸಿದೆ.


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ