ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ದೆಹಲಿಯಲ್ಲಿ ಸ್ಪಾಗಳ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಗಳ ಮೇಲೆ ಮಹಿಳಾ ಆಯೋಗ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿತ್ತು. ಈ ವೇಳೆ ಸ್ಪಾದಲ್ಲಿದ್ದ ಐವರು ಗ್ರಾಹಕರು ಮತ್ತು ಹುಡುಗಿಯರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
Laxmi News 24×7