Breaking News

ಪಂಚಾಯತ್ ರಾಜ್  ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು

Spread the love

ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆಯಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು.  ಇಂದು ಸಚಿವ ಕೆ.ಎಸ್ ಈಶ್ವರಪ್ಪಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ನನಗೆ ಇಂದು ಕೊರೊನಾ ಸೋಂಕು ದೃಢ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ.  ಸಧ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆ.29ರಂದು ಬೆಳಗಾವಿಗೆ ಆಗಮಿಸಿದ ಸಚಿವ ಈಶ್ವರಪ್ಪ ಅವರು ಶಿವಾಜಿ, ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಗಿದಪ್ಪಿಕೊಂಡು, ವಿವಾದ ಇಷ್ಟು ಬೇಗ ಇತ್ಯರ್ಥಗೊಳಿಸಿದ್ದಕ್ಕೆ ಧನ್ಯವಾದ  ಸಲ್ಲಿಸಿದ್ದರು.  ಜತೆಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಅವರು ಸಚಿವರಿಗೆ ಮನವಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ