Breaking News

ಹಿರಿಯ ಐಪಿಎಸ್‌ ಅಧಿಕಾರಿ ಹೌಸಿಂಗ್‌ ಬೋರ್ಡ್‌ ಡಿಜಿ ಆಗಿರುವ ಆರ್‌ಪಿ ಶರ್ಮಾ ತಮ್ಮ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Spread the love

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಹೌಸಿಂಗ್‌ ಬೋರ್ಡ್‌ ಡಿಜಿ ಆಗಿರುವ ಆರ್‌ಪಿ ಶರ್ಮಾ ತಮ್ಮ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಸಂಜೆ ತಮ್ಮ ನಿವಾಸದಲ್ಲೇ 2 ಬಾರಿ ಕುತ್ತಿಗೆಗೆ ಆರ್‌ಪಿ ಶರ್ಮಾ ಫೈರ್‌ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.

ಕೊತ್ತನೂರಿನ ಮನೆಯಲ್ಲೇ ತಮಗೆ ತಾವೇ ಸರ್ವಿಸ್‌ ರಿವಾಲ್ವರ್‌‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಮನೆಯಲ್ಲಿದ್ದವರು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಶರ್ಮಾ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ನೀಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಆರ್ ಪಿ ಶರ್ಮಾ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದ ಆರ್ ಪಿ ಶರ್ಮಾ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ರಾ ಅಥವಾ ಆಕಸ್ಮಿಕವಾಗಿ ಗುಂಡು ಸಿಡಿಯಿತೇ ಎಂಬ ಪ್ರಶ್ನೆ ಎದ್ದಿದೆ.

ಉತ್ತರ ಪ್ರದೇಶ ಮೂಲದ  1977 ರ ಬ್ಯಾಚ್ ಅಧಿಕಾರಿಯಾಗಿರುವ ಆರ್ ಪಿ ಶರ್ಮ ಬಿಎಂಟಿಎಫ್‌ನಲ್ಲಿ ಎಡಿಜಿಯಾಗಿದ್ದ ವೇಳೆ ಸಾಕಷ್ಟು ಹೆಸರು ಮಾಡಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ