Breaking News

ರಾಹುಲ್ ಗಾಂಧಿ ಪ್ರಧಾನಿಯಾದ್ರೆ, ಸಿದ್ದರಾಮಯ್ಯ ಹೋಗಿ ಕೇಳಲಿ: ಸುಧಾಕರ್ ವ್ಯಂಗ್ಯ

Spread the love

ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬದಲಾವಣೆ ಮಾಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಸಲಹೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿ, ಬದಲಾವಣೆಯ ಬಗ್ಗೆ ರಾಹುಲ್ ಗಾಂಧಿ ಪ್ರಧಾನಿ ಆದರೆ ಸಿದ್ದರಾಮಯ್ಯ ಹೋಗಿ ಕೇಳಲಿ. ಈಗ ಕೇಳೋದಲ್ಲ. ಡಿಜೆಹಳ್ಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿ. ಅವರು ಸ್ವತಂತ್ರರು ಎಲ್ಲಿಗೆ ಬೇಕಾದರೂ ಹೋಗಬಹುದು ಎಂದರು.

ಕೇಂದ್ರದಿಂದ ರಾಜ್ಯದ ಜಿಎಸ್‍ಟಿ ಪಾಲು ಖೋತಾ ಆಗಿದೆ ಅನ್ನೋದು ಸರಿ. ಆದರೆ ಈ ಬಗ್ಗೆ ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳು ಏನ್ ಮಾಡಬೇಕು ಎಂಬುದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ನಾವು ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಇಳಿದು ಹಣ ಪಡೆಯಲ್ಲ. ಕಾಂಗ್ರೆಸ್ಸಿನವರಿಗೆ ಪದೇ ಪದೇ ಘರ್ಷಣೆ ಮಾಡೋದು ಅಭ್ಯಾಸ. ಆದರೆ ನಮಗೆ ರಾಜ್ಯದ ಅಭಿವೃದ್ಧಿ ಹೇಗೆ ಮಾಡಬೇಕು ಎಂಬುದು ಗೊತ್ತಿದೆ ಅದನ್ನು ನಾವು ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಸಸಿ ನೆಟ್ಟ ಮಕ್ಕಳು

Spread the love ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ