Breaking News

ಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯ ಮಾಹಿತಿ: ಸೆ. 5 ರವರೆಗೆ ಭಾರೀ ಮಳೆ ಸಾಧ್ಯತೆ

Spread the love

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಪ್ಪಳ, ಗದಗ ಮೊದಲಾದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭದ್ರಾವತಿ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಬೇಲೂರಿನಲ್ಲಿ ಗರಿಷ್ಠ 11 ಸೆ.ಮೀ.

ಮಳೆಯಾಗಿದೆ. ಮಂಗಳವಾರ ರಾತ್ರಿ, ಬುಧವಾರ ಮಧ್ಯಾಹ್ನದ ನಂತರ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ರೈತಾಪಿ ವರ್ಗದಲ್ಲಿ ಸಂತಸ ತಂದಿದೆ ಎನ್ನಲಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ