Breaking News

ಕೋಲಾರ: ಜಿಲ್ಲೆಯಲ್ಲಿ 79 ಮಂದಿಗೆ ಸೋಂಕು

Spread the love

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 79 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 763ಕ್ಕೆ ಏರಿಕೆಯಾಗಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರಪೀಡಿತ 27 ಮಂದಿಗೆ ಹಾಗೂ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 17 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ 5 ಮಂದಿಗೆ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ತಲಾ 8 ಮಂದಿಗೆ ಸೋಂಕು ಹರಡಿದೆ.

ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 7 ಮಂದಿಗೆ, ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

70 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ 70 ಮಂದಿ ಗುಣಮುಖರಾಗಿ ಬುಧವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 16 ಮಂದಿ, ಮಾಲೂರು ತಾಲ್ಲೂಕಿನ 24, ಬಂಗಾರಪೇಟೆ ತಾಲ್ಲೂಕಿನ 6, ಕೆಜಿಎಫ್‌ ತಾಲ್ಲೂಕಿನ 8, ಮುಳಬಾಗಿಲು ತಾಲ್ಲೂಕಿನ 5 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಬೆಳೆ ಸಮೀಕ್ಷೆದಾರರ ಸಂಘದಿಂದ ಬೃಹತ್ ಪ್ರತಿಭಟನೆ: ಜೀವ ವಿಮೆ, ಸೌಲಭ್ಯಗಳಿಗೆ ಆಗ್ರಹ!

Spread the love ಬೆಳೆ ಸಮೀಕ್ಷೆದಾರರ ಸಂಘದಿಂದ ಬೃಹತ್ ಪ್ರತಿಭಟನೆ: ಜೀವ ವಿಮೆ, ಸೌಲಭ್ಯಗಳಿಗೆ ಆಗ್ರಹ! ಬೆಳೆ ಸಮೀಕ್ಷೆದಾರರಿಗೆ ಜೀವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ