Breaking News

ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ.

Spread the love

ಕೊಪ್ಪಳ : ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ.

ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದ ವೃದ್ಧೆಯೋರ್ವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ 3 ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇಷ್ಟವಿಲ್ಲದ ಅವರಿಗೆ, ವೈದ್ಯರು ಕುಟುಂಬದವರಿಗೆ ಇನ್ನೂ ಕೆಲವು ದಿನ ಈ ಆಸ್ಪತ್ರೆಯಲ್ಲಿರಲು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗಲಿಲ್ಲ. ವೈದ್ಯರೊಂದಿಗೆ ವಾಗ್ವಾದಕ್ಕೆ ಇಳಿದಿದ್ದ ಸಂಬಂಧಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆಯೇ ಬೇಡ, ಮನೆಯಲ್ಲಿಯೇ ಇರುವುದಾಗಿ ತಿಳಿಸಿ ಡಿಸ್ಚಾರ್ಜ್​ಗೆ ಒತ್ತಾಯಿಸಿದರು. ವೃದ್ಧೆಯ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರು ಮನೆಗೆ ಕಲಿಸಲು ಒಪ್ಪಿದ್ದಾರೆ.

ಆ್ಯಂಬುಲೆನ್ಸ್ ಸೇವೆಯನ್ನು ಸಹ ನಿರಾಕರಿಸಿದ ವೃದ್ಧೆ ಬೈಕ್​​ನಲ್ಲಿಯೇ ತಮ್ಮ ಗ್ರಾಮಕ್ಕೆ ಬಂದಿದ್ದಾರೆ.

ವೈದ್ಯರು 65 ವರ್ಷದ ವೃದ್ಧೆಗೆ ಈ ಆಸ್ಪತ್ರೆಯಲ್ಲಿ ಒಬ್ಬಂಟಿಯಾಗಿ ಚಿಕಿತ್ಸೆ ಪಡೆಯಲು ಇಷ್ಟವಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಮನೆಯವರು ಹೋಮ್ ಐಸೋಲೇಷನ್​ಗೆ ಒಪ್ಪಿದ್ದರಿಂದ ಅನುಮತಿ ನೀಡಲಾಗಿದೆ ಎಂದು ಕೆಲವರ ಅಭಿಪ್ರಾಯ.

ಕುಷ್ಟಗಿ ನಿವಾಸಿ ಅಬ್ದುಲ್ ನಯೀಮ್ ಮಾತನಾಡಿ, ಈ ಕೋವಿಡ್ ಆಸ್ಪತ್ರೆಯು ಅವ್ಯವಸ್ಥೆಯ ಆಗರವಾಗಿದ್ದರಿಂದ ರೋಗಿಗಳು ಚಿಕಿತ್ಸೆಯನ್ನು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ. ಈ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ ವ್ಯವಸ್ಥೆ ಒದಗಿಸಬೇಕು ಎಂದು ಒತ್ತಾಯಿಸಿದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ