ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು 2020-23ರವರೆಗೆ ಮುಂದುವರಿಕೆ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2020ಕ್ಕೆ ಅನುಮೋದನೆ ಪಡೆಯುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಗುರುವಾರ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಈ ಸಭೆಯಲ್ಲಿ ಖಾಸಗಿ ವೈದ್ಯಕಿಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಕೆಪಿಎಂಇ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಯಾವ ಅಂಶಗಳಿಗೆ ತಿದ್ದುಪಡಿ ಎಂಬುದು ತಿಳಿದುಬಂದಿಲ್ಲ.
ಉಳಿದಂತೆತ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಸಂಬಂಧ ಕ್ಲಸ್ಟರ್ ವಾರು ವಿಮಾ ಸಂಸ್ಥೆಗಳನ್ನು ನಿಗದಿಪಡಿಸುವುದು, ಕರ್ನಾಟಕ ಮುನ್ಸಿಪಲ್ ಕಾರ್ಪೊರೇ|ನ್ (2ನೇ ತಿದ್ದುಪಡಿ ವಿಧೇಯಕ)-2020, ಕರ್ನಾಟಕ ಸರಕು-ಸೇವೆಗಳ ತಿದ್ದುಪಡಿ ವಿಧೇಯಕ ಚರ್ಚೆಗೆ ಬರಲಿದೆ ಎನ್ನಲಾಗುತ್ತಿದೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??