ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ.
ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು ಸರ್ಕಾರ ಮಾಹಿತಿ ನೀಡಿತು.
‘ರಾಷ್ಟ್ರೀಯ ಕಾನೂನು ಶಾಲೆ ಕಾಯ್ದೆ-2020 ಪ್ರಕಾರ ರಾಜ್ಯದಲ್ಲಿ 10 ವರ್ಷ ವ್ಯಾಸಂಗ ಮಾಡಿರುವ ಶೇ 25ರಷ್ಟು ವಿದ್ಯಾರ್ಥಿಗಳಿಗೆ ಮೀಸಲಾತಿ ದೊರೆಯಲಿದೆ.
ಇದು ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ’ ಎಂಬುದು ಅರ್ಜಿದಾರರ ವಾದ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??