Breaking News

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು

Spread the love

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ.

 

ಪೊಲೀಸ್ ಜೊತೆಗೆ ಸೇರಿ ಬೆಂಗಳೂರಿನ ಮತ್ತೊಬ್ಬ ವ್ಯಕ್ತಿ ಬೆದರಿಕೆ ಹಾಕಿದ್ದು ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಇವತ್ತು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ