Breaking News

ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ.

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ.

ಹೌದು. ರಾಗಿಣಿ, ಸಂಜನಾ ಹೆಸರು ಥಳುಕು ಹಾಕಿಕೊಳ್ಳುತ್ತಿದ್ದಂತೆಯೇ ಇದೀಗ ನಟಿ ಶರ್ಮಿಳಾ ಮಾಂಡ್ರೆ ಆಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಶರ್ಮಿಳಾಗೂ ನೋಟಿಸ್ ನೀಡುವ ಸಾಧ್ಯತೆಗಳು ಇವೆ.

ಈಗಾಗಲೇ ರಾಗಿಣಿ ಆಪ್ತ ರವಿಶಂಕರ್ ನೀಡಿದ ಮಾಹಿತಿ ಆಧರಿಸಿ ಕಾರ್ತಿಕ್ ರಾಜುವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ನಟಿ ರಾಗಿಣಿ ಆಪ್ತ ರವಿಶಂಕರ್ ಹೇಳಿದಂತೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ಈ ಹಿನ್ನೆಲೆ ಕಾರ್ತಿಕ್ ರಾಜುವನ್ನು ವಶಕ್ಕೆ ಪಡೆಯಲಾಗಿದೆ.

ಇತ್ತ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಶರ್ಮಿಳಾ, ನನಗೆ ಹಾಗೂ ನನ್ನ ಕುಟುಂಬದ ಕೆಲ ಸದಸ್ಯರಿಗೆ ಕೊರೊನಾ ಪಾಸಿಟಿವ್ ಎಂದು ಬಂದಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ನಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳೊ ಪ್ಲಾನ್ ಮಾಡಿದ್ರಾ ಅನ್ನೋ ಪ್ರಶ್ನೆ ಎದುರಾಗಿದೆ.

ನಟಿ, ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಆಪ್ತ ರವಿ ಶಂಕರ್ ಬಳಿಕ ನಟಿ ಸಂಜನಾ ಗಲ್ರಾನಿಯ ಆಪ್ತ ರಾಹುಲ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ವಿಡಿಯೋ ಸಾಕ್ಷ್ಯ ಸೇರಿ ಹಲವು ಪ್ರಮುಖ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಸಿಬಿ ಪೊಲೀಸರು ನಟಿ ರಾಗಿಣಿ ಆಪ್ತ ರವಿಶಂಕರ್ ಹಾಗೂ ಸಂಜನಾ ಗಲ್ರಾನಿ ಆಪ್ತ ರಾಹುಲ್‍ನನ್ನು ವಶಕ್ಕೆ ಪಡೆದಂತಾಗಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ಕಾರಿನ ಸಮೇತ ರಾತ್ರಿ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಸೆಲೆಬ್ರಿಟಿಗಳ ಪಾರ್ಟಿಗೆ ಡ್ರಗ್ ಸಪ್ಲೈ ಮಾಡುತಿದ್ದನಾ ರಾಹುಲ್ ಎಂಬ ಪ್ರಶ್ನೆ ಇದೀಗ ಮೂಡಿದೆ. ರಾಹುಲ್ ಡ್ರಗ್ ಪೆಡ್ಲರ್ ಆಗಿರುವ ಶಂಕೆ ಹಿನ್ನೆಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿಯೇ ರಾಹುಲ್ ನನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ