Breaking News

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ‘ಅರಿವು’ ಯೋಜನೆಯಡಿ ಅರ್ಜಿ ಆಹ್ವಾನ

Spread the love

ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ.

ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ 18 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಎದುರು ರಸ್ತೆ, ಅಚ್ಯುತ್‍ರಾವ್ ಲೇಔಟ್ 4ನೇ ತಿರುವು ಶಿವಮೊಗ್ಗ ಇಲ್ಲಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.

ಮಾಹಿತಿಗಾಗಿ ನಿಗಮದ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-228262 ನ್ನು ಸಂಪರ್ಕಿಸುವುದು.


Spread the love

About Laxminews 24x7

Check Also

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ:ಹೊರಟ್ಟಿ

Spread the loveಬೆಂಗಳೂರು, ಡಿಸೆಂಬರ್ 23: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ