Breaking News

ನನ್ನ ಮಗಳ ಮೇಲೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು.:ರಾಗಿಣಿ ತಾಯಿ ರೋಹಿಣಿ

Spread the love

ಬೆಂಗಳೂರು: ನನ್ನ ಮಗಳ ಮೇಲೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಅವಳನ್ನು ಸಿಕ್ಕಿಹಾಕಿಸಲು ನೋಡುತ್ತಿದ್ದಾರೆ ಎಂದು ನಟಿ, ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಹೇಳಿದ್ದಾರೆ.

ಈ ಕುರಿತುಮಾತನಾಡಿದ ಅವರು, ನನ್ನ ಮಗಳ ಮೇಲಿನ ಎಲ್ಲ ಆರೋಪಗಳು ಸುಳ್ಳು. ಅವಳನ್ನು ಸಿಕ್ಕಿ ಹಾಕಿಸಲಾಗುತ್ತಿದೆ. ಇದೆಲ್ಲವೂ ಸುಳ್ಳು, ನನ್ನ ಮಗಳು ಪ್ರಕಣದಿಂದ ಮುಕ್ತಳಾಗಿ ಬರುತ್ತಾಳೆ. ನಾನು ಎಲ್ಲ ರೀತಿಯ ದಾಖಲೆಗಳನ್ನು ಸಲ್ಲಿಸುತ್ತೇನೆ. ಶೀಘ್ರವೇ ನನ್ನ ಮಗಳು ಆರೋಪದಿಂದ ಮುಕ್ತಳಾಗುತ್ತಾಳೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಟಿ ರಾಗಿಣಿ ಭೇಟಿ ಮಾಡಲು ಕುಟುಂಬಸ್ಥರು ಸಿಸಿಬಿ ಕಚೇರಿಗೆ ಆಗಮಿಸಿದ್ದರು. ಮಗಳನ್ನು ಭೇಟಿ ಮಾಡಿದ ಬಳಿಕ ಅವರ ತಾಯಿ ಮಾತನಾಡಿದ್ದಾರೆ. ಈ ವೇಳೇ ತಮ್ಮ ಮಗಳನ್ನು ಬಿಡಿಸಿಕೊಂಡು ಬರಲು ದಾಖಲೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ