ಬಾಗಲಕೋಟೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಯಾರು ಅಂತಾ ನನಗೆ ಗೊತ್ತಿಲ್ಲ. ಯಾರೇ ತಪ್ಪು ಮಾಡಿದ್ದರು ಅಂತವರ ಮೇಲೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿ, ಅಧಿಕಾರಿಗಳ ಮಕ್ಕಳೇ ಯಾರೇ ಆಗಿದ್ರೂ ದೇಶದ ಕಾನೂನು ಎಲ್ಲರಿಗೂ ಒಂದೇ. ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿರುವವ ತನಿಖೆ ನಡೆಯುತ್ತಿದೆ.ತನಿಖೆ ಮುಗಿಯುವವರೆಗೆ ಏನೂ ಹೇಳಲು ಆಗಲ್ಲ. ವಿಷಯವನ್ನು ಗೌಪ್ಯವಾಗಡಿಬೇಕಾಗುತ್ತೆ. ತನಿಖೆ ಮುಗಿದ ತಕ್ಷಣ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸುವ ಮುಂಚೆ ಮಾಹಿತಿ ನೀಡಲಾಗುತ್ತದೆ ಎಂದರು.
ಎಲ್ಲವೂ ಪೊಲೀಸರಿಂದ ಸರಿಮಾಡಲು ಸಾಧ್ಯವಿಲ್ಲ. ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಚಿವ ಸಂಪುಟ ವಿಸ್ತರಣೆ ಮುನ್ನ ನಿಮಗೂ ಆಹ್ವಾನ ನೀಡುತ್ತೇವೆ ಎಂದು ನಗೆ ಚಟಾಕಿ ಹಾರಿಸಿದರು.
ಸಚಿವರ ಬದಲಾವಣೆ ಕುರಿತು ಯಾವುದೇ ಬೆಳವಣಿಗೆ ನಡೆದಿಲ್ಲ ಎಂದರು. ಡ್ರಗ್ಸ್ ದಂಧೆಯಿಂದಲೇ ಬಂದ ಹಣದಿಂದ ಮೈತ್ರಿ ಸರ್ಕಾರ ಕೆಡವಲಾಯ್ತು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಕುಮಾರಸ್ವಾಮಿ ಅವರು ರಾಜಕೀಯ ಪ್ರೇರಿತ ಆರೋಪ ಮಾಡುತ್ತಾರೆ ಎಂದರು.