Breaking News

ಉಪ ಚುನಾವಣೆಗೆದಿನಾಂಕವನ್ನೇ ನಿಗದಿಪಡಿಸಿಲ್ಲ,ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ,

Spread the love

ಬೆಂಗಳೂರು, ಸೆ.5- ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿಪಡಿಸಿಲ್ಲ, ಆದರೂ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ, ಬಿಜೆಪಿಗೆ ಇಲ್ಲಿ ಯಾವುದೇ ನೆಲೆ ಇಲ್ಲ, ಆದರೆ ಶಿರಾ ಕ್ಷೇತ್ರ, ಬಿಜೆಪಿ ಸಂಸದ ಆನೇಕಲ್ ನಾರಾಯಣ ಸ್ವಾಮಿ ಪ್ರತಿನಿಧಿಸುವ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬಿ

ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಶಿರಾದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ, ಜೊತೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.

ಇದರ ಜೊತೆಗೆ 2018ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಟಿಬಿ ಜಯಚಂದ್ರ ಕೂಡ ಬೀಡು ಬಿಟ್ಟು ಸಭೆಗಳನ್ನು ನಡೆಸುತ್ತಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಸಕ ದಿವಂಗತ ಸತ್ಯನಾರಾಯಣ ಅವರ 21 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಜೆಪಿ ನಾಯಕರು ಶಿರಾದಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಿದ್ದಾರೆ.

 


Spread the love

About Laxminews 24x7

Check Also

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the loveಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ