Breaking News

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 38 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 95 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,824 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 9,575 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,92,873ಕ್ಕೆ ಏರಿಕೆಯಾಗಿದೆ. 99,266 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ