ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಹಳದಿ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಚೆಂಬರ್ 8ರವರೆಗೂ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
Laxmi News 24×7