Breaking News

ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ

Spread the love

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ

ಬಸ್ ಚಾಲಕ ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದೆ. ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಪ್ರಕ್ರಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಬಸ್ಸುನ್ನು ತೆರವುಗೊಳಿಸುವ ಕೆಲಸವನ್ನು ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ