ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇಂದು ಬೆಳಗ್ಗೆ ಮಲೈಕಾ ಅವರ ಪ್ರಿಯಕರ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಸ್ವತಃ ಅವರೇ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದರು. ಈಗ ಅರ್ಜುನ್ ಜೊತೆ ಇದ್ದ ಮಲೈಕಾ ಅರೋರಾ ಅವರಿಗೂ ಕೊರೊನಾ ವೈರಸ್ ದೃಢಪಟ್ಟಿದೆ.
ಈಗ ಸಂಜೆ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರ ಸಹೋದರಿ ಅಮೃತ ಅರೋರಾ ಅವರು ರಾಷ್ಟ್ರೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಮಲೈಕಾ ಆರೋರ ಇತ್ತೀಚೆಗೆ ಹಿಂದು ಸುದ್ದಿವಾಹಿನಿಯೊಂದರಲ್ಲಿ ಪ್ರಸಾರವಾಗುವ ಇಂಡಿಯನ್ ಬೆಸ್ಟ್ ಡ್ಯಾನ್ಸರ್ ಎಂಬ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಜಡ್ಜ್ ಆಗಿ ಕಾಣಿಸಿಕೊಂಡಿದ್ದರು. ಇವರ ಜೊತೆ ನಟಿ ನೋರಾ ಫತೇಹಿಯವರು ಕೂಡ ಕಾಣಿಸಿಕೊಂಡಿದ್ದರು.
ತನಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಇಂದು ಬೆಳಗ್ಗೆ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿದ್ದ ಅರ್ಜುನ್ ಕಪೂರ್, ನನಗೆ ಕೊರೊನಾ ಸೋಂಕು ತಗುಲಿರೋದು ನಿಮಗೆ ತಿಳಿಸುವುದು ನನ್ನ ಕರ್ತವ್ಯ. ಸದ್ಯ ನಾನು ಆರೋಗ್ಯವಾಗಿದ್ದು, ಕೆಲ ಕೊರೊನ ಗುಣಲಕ್ಷಣಗಳು ಕಾಣಿಸಿಕೊಂಡಿವೆ. ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮ ಬೆಂಬಲಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಆರೋಗ್ಯದ ಅಪ್‍ಡೇಟ್ ನೀಡುತ್ತಿರುತ್ತೇನೆ ಎಂದು ಬರೆದುಕೊಂಡಿದ್ದರು.
ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ಅರ್ಜುನ್ ಕಪೂರ್ ಅವರ ತಂದೆ ಬೋನಿ ಕಪೂರ್ ಮತ್ತು ಅವರ ಮನೆಯ ಸಿಬ್ಬಂದಿಗೆ ಸಹ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು. ಸದ್ಯ ಬೋನಿ ಕಪೂರ್ ಮತ್ತು ಅವರ ಮಕ್ಕಳಾದ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಕೊರೊನಾದಿಂದ ಗುಣಮುಖರಾಗಿದ್ದಾರೆ. ನಂತರ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಮತ್ತು ಅವರ ಮಗಳಿಗೂ ಕೊರೊನಾ ವೈರಸ್ ತಗುಲಿತ್ತು.
Laxmi News 24×7