Breaking News

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಘಾಟು ಆಯ್ತು ಈಗ ಎಣ್ಣೆ ಕಿರಿಕ್

Spread the love

ಬೆಂಗಳೂರು: ತಡರಾತ್ರಿ ಸ್ಯಾಂಡಲ್‌ವುಡ್‌ ನಟರೊಬ್ಬರು ಕುಡಿದ ಮತ್ತಿನಲ್ಲಿ ನಗರದ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.ಹರ್ಷ ಕಿರಿಕ್‌ ಮಾಡಿಕೊಂಡ ನಟ. ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್‌ ಮುಂಭಾಗ ಗೆಳೆಯರೊಂದಿಗೆ ನಟ ಹರ್ಷ ಕುಡಿಯುತ್ತಿದ್ದರು.

ಅಪಾರ್ಟ್‌ಮೆಂಟ್‌ ಮುಂದೆ ಕುಡಿಯುತ್ತಿರುವ ವಿಚಾರ ತಿಳಿದು ರಾತ್ರಿ ಬೀಟ್‌ನಲ್ಲಿದ್ದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಕುಡಿದು ಇಲ್ಲಿ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.

“ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ, ನಮಗೆ ದೊಡ್ಡ ವ್ಯಕ್ತಿಗಳ ಪರಿಚಯವಿದೆ. ನೀವು ಏನು ಬೇಕಾದರೂ ಮಾಡಿಕೊಳ್ಳಿ” ಎಂದು ಅವಾಜ್‌ ಹಾಕಿದ್ದಾರೆ. ಕಿರಿಕ್‌ ಮಾಡಿದ ಕೂಡಲೇ ಪೊಲೀಸರು ಸ್ನೇಹಿತರ ಜೊತೆ ಹರ್ಷರನ್ನು ವಶಕ್ಕೆ ಪಡೆದು ಕಾರಿನಲ್ಲಿ ಕುಳ್ಳಿರಿಸಿ ಠಾಣೆಗೆ ಕರೆ ತಂದು ಬಿಸಿ ಮುಟ್ಟಿಸಿದ್ದಾರೆ.

ರಾಜಾಹುಲಿ, ವರ್ಧನ ಸೇರಿದಂತೆ ಹಲವು ಚಿತ್ರಗಳಲ್ಲಿ ಹರ್ಷ ನಟಿಸಿದ್ದಾರೆ.


Spread the love

About Laxminews 24x7

Check Also

ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ

Spread the love ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ