Home / ಜಿಲ್ಲೆ / ಕ್ರೈಸ್ತ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ – ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ಅನುದಾನ

ಕ್ರೈಸ್ತ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ – ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ಅನುದಾನ

Spread the love

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ೨೦೦ ಕೋಟಿ ಅನುದಾನವನ್ನು ಒದಗಿಸುವ ಮೂಲಕ ರಾಜ್ಯದಲ್ಲಿನ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇದಲ್ಲದೆ ರಾಜ್ಯದ ಎಲ್ಲ ಜಾತಿ, ಜನಾಂಗ, ಧರ್ಮದವರಿಗೂ ಅನುದಾನ ನೀಡುವ ಮೂಲಕ, ಸಮತೋಲನ, ಸೌಹಾರ್ದತೆ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ 10 ಕೋಟಿ ಅನುದಾನ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನೀಡಲಾಗಿದೆ.

ಇದ್ದಲ್ಲದೆ ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ೧೦ ಕೋಟಿ ರೂ.ಗಳ , ವಿಶ್ವ ಕರ್ಮ ಅಭಿವೃದ್ಧಿ ನಿಗಮಕ್ಕೆ ೨೫ ಕೋಟಿ ರೂ.ಗಳ , ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ೫೦ ಕೋಟಿ ರೂ.ಗಳನ್ನು, ಆರ್ಯ ವೈಶ್ಯ ಅಭಿವೃದ್ದಿ ನಿಗಮಕ್ಕೆ ೧೦ ಕೋಟಿ ರೂ.ಗಳನ್ನು, ಕುಂಬಾರ ಸಮುದಾಯದ ಅಭಿವೃದ್ಧಿಗಾಗಿ ೨೦ ಕೋಟಿಗಳನ್ನು ಮೀಸಲಿಡಲಾಗಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ